ಎಲ್ಲಿ ಧರ್ಮಗಳು ಪರಸ್ಪರ ಸಮಾನವಾಗಿ...ಈ ಸಮಾನವಾಗಿ ಎಂಬುದನ್ನು ಒತ್ತಿ ಹೇಳಬೇಕಿದೆ, ಅದು ಸಮಾನವಾಗಿ ಗೌರವಿಸಲ್ಪಡುವುದೋ ಅಲ್ಲಿ ಧರ್ಮಗಳ ತತ್ವ ಜೀವಂತವಾಗಿ ಆನಷ್ಠಾನದಲ್ಲಿರುರುತ್ತದೆ.. ಆದರೆ ಮೂರ್ಖರಿಗೆ ಇದು ಅರ್ಥವಾಗುವುದಿಲ್ಲ. ಹಾಗಾಗಿ ತಿದ್ದುಪಡಿ ಸಮಾನತೆ ಎಲ್ಲವನ್ನೂ ಹಿಂದೂ ಧರ್ಮದಲ್ಲಿ ಅರೋಪಿಸಿಬಿಡುತ್ತಾರೆ. ಇವರ ಬಗೆಯಲ್ಲಿ ಹಿಂದೂ ಧರ್ಮಮಾತ್ರ ಬದಲಾಗಿ ಪರಿಷ್ಕರಿಸಬೇಕಾದ ಗುಣಗಳನ್ನು ಹೊಂದಿದೆ.ಆದರೆ ಪ್ರತಿಯೊಂದು ಧರ್ಮದಲ್ಲೂ ಧನಾತ್ಮಕ ಋಣಾತ್ಮಕ ಗುಣಗಳಿವೆ. ಅದನ್ನು ಒಪ್ಪಿಕೊಳ್ಳುವ ಪ್ರಾಮಣಿಕತೆ ಇರಬೇಕು ಅಷ್ಟೇ. ಆದರೆ ಧಾರ್ಮಿಕ ನಿರಪೇಕ್ಷತೆಗೆ ಪಕ್ಷಪಾತ ಶಾಪವಾಗಿ ಪರಿಣಮಿಸುವಾ ಹಿಂದೂ ಧರ್ಮ ಗುರಿಯಾಗುತ್ತದೆ.
ಪರಧರ್ಮವನ್ನು ಗೌರವಿಸುವಾಗ ನಮ್ಮ ದರ್ಮದ ಶ್ರೇಷ್ಠ ತೆಯನ್ನು ಬಿಂಬಿಸಬೇಕು ಎನ್ನವ ಸಾಮನ್ಯ ಜ್ಞಾನವೂ ಇಲ್ಲದೇ ಹಿಂದೂ ಧರ್ಮವನ್ನು ಅವಗಣಿಸುವ ಈ ಭ್ರಷ್ಟ ಜಾತ್ಯಾತೀತ ತತ್ವದ ಢಾಂಭಿಕತನವನ್ನು ಅರಿಯಬೇಕು. ಅನ್ಯ ಧರ್ಮದ ಆಚರಣೆಯಲ್ಲಿ ನಮ್ಮ ಧರ್ಮವನ್ನು ಒತ್ತೆ ಇಡುವಾಗ ಅನ್ಯ ಧರ್ಮವನ್ನು ಇಲ್ಲೂ ಒತ್ತೆ ಇರಿಸಿಕೊಳ್ಳಬಹುದಾದ ಸಮಾನ ಸೌಹಾರ್ದತೆಯನ್ನು ಅಳವಡಿಸುವುದು ಧಾರ್ಮಿಕ ಅವಕಾಶವಾಗಬೇಕು. ಆದರೆ ಪರಮ ಸ್ವಾರ್ಥದ ಪಕ್ಷಪಾತದಲ್ಲಿ ಇದನ್ನೆಲ್ಲ ಚಿಂತಿಸುವ ಮನೋಭಾವದ ಕೊರತೆಯಾಗಿದೆ. ಇದನ್ನು ಪರಮ ಮೂರ್ಖತನ ಎನ್ನಬೇಕು. ಬಲವಂತದಿಂದ ಕುಂಕುಮ ತಿಲಕ ಇರಿಸಿದರೂ ಬಲವಂತದಿಂದ ಟೋಪಿ ಧರಿಸಿದರೂ ಅದು ಧಾರ್ಮಿಕ ಆಷರಣೆಯಾಗುವುದಿಲ್ಲ. ಕೇವಲ ಆಷಾಢಭೂತಿತನದ ಮೂರ್ಖತನವಾಗುತ್ತದೆ
No comments:
Post a Comment